ವಿಷ್ಣುವರ್ಧನ್ ಜೀವನಚರಿತ್ರೆ

Spread the love

ಬಾಲ್ಯ ಜೀವನ:
ಡಾ. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಹೆಚ್.ಎಲ್.ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳ ಮಗನಾಗಿ 18 ಸೆಪ್ಟೆಂಬರ್ 1950 ರಲ್ಲಿ ಜನಿಸಿದ್ದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು.  ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಪೂರ್ಣಗೊಳಿಸಿ, ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ನೀವು ನೋಡಲೇಬೇಕಾದ ವಿಷ್ಣುವರ್ಧನ್ ರ ಚಲನಚಿತ್ರಗಳು

ಕನ್ನಡ ಚಿತ್ರರಂಗದ ದಿಗ್ಗಜ ನಟರಲ್ಲಿ  ವಿಷ್ಣುವರ್ಧನ್ ಒಬ್ಬರು. ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಟಿಸಲು ಪ್ರಾರಂಭಿದಾಗ ಇವರಿಗೆ ವಿಷ್ಣುವರ್ಧನ್ ಎಂದು ಕರೆಯಲಾಗಿತ್ತು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು 200 ಕ್ಕು ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾಗಿದ್ದರು.

ಸಿನಿಮಾರಂಗಕ್ಕೆ ನಡೆದು ಬಂದ ಹಾದಿ:
ವಿಷ್ಣು 1955ರಲ್ಲಿ “ಶಿವಶರಣ ನಂಬೆಯಕ್ಕ” ಎಂಬ ಸಿನೆಮಾದಲ್ಲಿ ಬಾಲ ನಟನಾಗಿ ನಟಿಸಿದ್ದರು. ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು.
ಶಂಕರ್ ಸಿಂಗ್ ಸಿದ್ದಪಡಿಸಿದ ಈ ಸಿನೆಮಾ ಸಂಪತ್ ಕುಮಾರ್ (ವಿಷ್ಣು) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿತು, ಮುಂದೆ 1956ರಲ್ಲಿ “ಕೋಕಿಲವಾಣಿ” ಎಂಬ ಮತ್ತೊಂದು ಸಿನೆಮಾದಲ್ಲಿ ಕೂಡ ವಿಷ್ಣು ನಟಿಸಿದ್ದರು. ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡರು.

1972 ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ “ನಾಗರಹಾವು” ಇವರ ಮೊದಲ ಚಿತ್ರದಲ್ಲಿ  ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ‘ವಿಷ್ಣುವರ್ಧನ್’ ಎಂದು ಹೆಸರಿಟ್ಟಿದ್ದು ಪುಟ್ಟಣ್ಣ ಕಣಗಾಲ್. ಹೆಸರಿನ ಬದಲಾವಣೆಯೊಂದಿಗೆ ನಾಯಕನಟನಾಗಿ ನಾಗರಹಾವು ಚಿತ್ರದೊಂದಿಗೆ ವಿಷ್ಣುವರ್ಧನ ಎಂದು ಜನಪ್ರಿಯರಾಗಿದ್ದರು.1980 ರಲ್ಲಿ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂದ “ಮಾಲ್ಗುಡಿ ಡೇಸ್” ಎಂಬ ಕಿರುತೆರೆಯಲ್ಲಿ ನಟಿಸಿದರು .
ನಟನೆಯಲ್ಲದೇ  ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ, ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ. ಹೀಗೆ ಕನ್ನಡ ಸಿನಿಮಾಗಳಲ್ಲಿ ನಟಿಸಿ ಇಡೀ ಚಿತ್ರರಂಗದಲ್ಲಿಯೇ ಸುಪ್ರಸಿದ್ಧ ನಟರಾಗಿ ಹೊರಹೊಮ್ಮಿದ್ದರು. ಹೀಗೆ ಕೇವಲ ಕನ್ನಡ ಚಿತ್ರಗಳಲ್ಲಿ ನಟಿಸದೆ  ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು.
ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ವಿಷ್ಣು 30 ಡಿಸೆಂಬರ್ 2009 ರಲ್ಲಿ ವಿಧಿವಶರಾದರು. ಇವರಿಗೆ ಕೀರ್ತಿ ಮತ್ತು ಚಂದನಾ ಎಂಬ ಇಬ್ಬರು ಪುತ್ರಿಯರಿದ್ದಾರೆ.

Leave a Reply

Your email address will not be published. Required fields are marked *