ಗಣೇಶ್ ನಟನೆಯ ‘ಕೃಷ್ಣ ಪ್ರಣಯ ಸಖಿ’ ಟೀಸರ್, ಟ್ರೇಲರ್‌ ಬಿಡುಗಡೆ ಆಗಲ್ಲ! ಯಾಕೆ? ಇಲ್ಲಿದೆ ಅಸಲಿ ಸತ್ಯ!

Spread the love

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಆರಂಭದಿಂದಲೂ ಸಾಕಷ್ಟು ಸದ್ದು ಸುದ್ದಿ ಮಾಡಿರುವ ಸಿನಿಮಾ. ಮ್ಯಾಜಿಕಲ್ ಕಂಪೋಸರ್‌ ಎಂದೇ ಖ್ಯಾತಿ ಪಡೆದಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳು ಚಿತ್ರದಲ್ಲಿವೆ. ಈಗಾಗಲೇ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಾಲ್ಕು ಹಾಡುಗಳು ರಿಲೀಸ್ ಆಗಿವೆ. ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಆಗಸ್ಟ್ 15 ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಹಾಡುಗಳಿಂದ ಮಾತ್ರ ಸದ್ದು ಮಾಡುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಟೀಸರ್, ಟ್ರೇಲರ್‌ ಬಿಡುಗಡೆ ಆಗಲ್ಲ. ಹೀಗ್ಯಾಕೆ ಎಂಬುದನ್ನ ನಿರ್ದೇಶಕ ಶ್ರೀನಿವಾಸರಾಜು ವಿವರಿಸಿದ್ದಾರೆ.ರಿಲೀಸ್‌ಗೂ ಮುನ್ನವೇ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಹಾಡುಗಳ ಮೂಲಕ ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ ಸಿನಿಮಾದ ಹಾಡುಗಳು ಹಿಟ್ ಅಗಿವೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ ಆನಂದ್ ಆಡಿಯೋ ಸಂಸ್ಥೆ ಸಮಾರಂಭ ಆಯೋಜಿಸಿದ್ದರು. ಸಮಾರಂಭದಲ್ಲಿ ಹಾಡುಗಳನ್ನು ಬರೆದವರನ್ನು ಹಾಗೂ ಹಾಡಿದರವನ್ನು ಫಲಕ ನೀಡಿ ಸನ್ಮಾನಿಸಲಾಯಿತು. ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಗೀತರಚನೆಕಾರ ನಿಶಾನ್ ರೈ ಅವರನ್ನು ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್ ಆಡಿಯೋದ ಶ್ಯಾಮ್ ಮತ್ತು ಆನಂದ್ ಆತ್ಮೀಯವಾಗಿ ಸನ್ಮಾನಿಸಿದರು.

Leave a Reply

Your email address will not be published. Required fields are marked *