ಪವಿತ್ರಾ ಗೌಡ ಮಾಡೆಲ್ ಮತ್ತು ನಟಿ. 2023ರಲ್ಲಿ ರಮೇಶ್ ಅರವಿಂದ್ ನಟನೆಯ ಛತ್ರಿಗಳು ಸಾರ್ ಛತ್ರಿಗಳು ಸಿನಿಮಾದಲ್ಲಿ ಅಭಿನಯಿಸವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು.
ನಂತರ ಅಗಮ್ಯಾ, ಸಾಗುವ ದಾರಿ, ಪ್ರೀತಿ ಕಿತಾಬು ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದರು. ಆದರೆ ನಟನೆಯಲ್ಲಿ ದೊಡ್ಡ ಯಶಸ್ಸು ದೊರೆತಿಲ್ಲ. ಹೀಗಾಗಿ ಉದ್ಯಮದತ್ತ ಮುಖ ಮಾಡಿದರು. ಸದ್ಯ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ 777 ಹೆಸರಿನ ಫ್ಯಾಷನ್ ಬುಟಿಕ್ ನಡೆಸುತ್ತಿದ್ದಾರೆ. ಈ ಮೂಲಕ ಸೆಲೆಬ್ರಿಟಿಗಳಿಗೆ ಹಾಗೂ ಜನಸಾಮಾನ್ಯರಿಗೆ ಉಡುಗೆಗಳನ್ನು ಮಾರಾಟ ಮಾಡುತ್ತಾರೆ.
ಬಂಧನ: 2024ರ ಜೂನ್ 11ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ