ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. 1996ರ ಜೂನ್ 8ರಂದು ಬೆಂಗಳೂರಿನಲ್ಲಿ ಜನಿಸಿದ ಇವರು, ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ ಉಮೇಶ್ ಸುಪುತ್ರಿ. ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸಪ್ತಮಿ, ಉತ್ತಮ ಈಜುಗಾರ್ತಿ ಕೂಡ ಹೌದು. ಸಿನಿಮಾ ಕ್ಷೇತ್ರಕ್ಕೆ ಬರುವ ಮುನ್ನ ಈಜುಗಾರ್ತಿಯಾಗಿದ್ದ ಸಪ್ತಮಿ, ನ್ಯಾಷನಲ್ ಲೆವೆನ್‌ನಲ್ಲೂ ಭಾಗವಹಿಸಿದ್ದರು.
ಸಿನಿಮಾ
ಸಪ್ತಮಿ ಗೌಡ 2020ರಲ್ಲಿ ತೆರೆಕಂಡ ಡಾಲಿ ಧನಂಜಯ್ ಅಭಿನಯದ ಪಾಪ್ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ಮೊದಲ ಸಿನಿಮಾ ತೆರೆಕಂಡ ಎರಡು ವರ್ಷಗಳ ಬಳಿಕ ಸಪ್ತಮಿ 2022ರಲ್ಲಿ ‘ಕಾಂತಾರ’ ಸಿನಿಮಾದಲ್ಲಿ ನಟಿಸಿದರು. ಚಿತ್ರದಲ್ಲಿ ಫಾರೆಸ್ಟ್ ಗಾರ್ಡ್ ಲೀಲಾ ಪಾತ್ರದ ಮೂಲಕ ಗಮನ ಸೆಳೆದರು. ನಂತರ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಎಂಬ ಹಿಂದಿ ಸಿನಿಮಾದಲ್ಲಿ ನಟಿಸಿದರು. ಇದಾದ ಬಳಿಕ ಯುವ ಸಿನಿಮಾದಲ್ಲಿ ನಟಿಸಿದ್ದಾರೆ.