ನಿವೇದಿತಾ ಗೌಡ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರಾದ ಇವರು, 1998 ಮೇ 12ರಂದು ಜನಿಸಿದರು. ಟಿಕ್‌ಟಾಕ್ ವಿಡಿಯೋ ಮೂಲಕ ಬೆಳಕಿಗೆ ಬಂದ ನಿವೇದಿತಾ ಗೌಡ ಚಂದನವನದಲ್ಲಿ ಗೊಂಬೆ ಎಂದೇ ಖ್ಯಾತಿ ಪಡೆದಿದ್ದಾರೆ. ಕಿಚ್ಚ ಸುದೀಪ್ ನಿರೂಪಣೆಯ ಬಿಗ್‌ಬಾಸ್ ಸೀಸನ್ ೫ರಲ್ಲಿ ಭಾಗವಹಿಸುವ ಮೂಲಕ ಜಪ್ರಿಯತೆ ಪಡೆದರು. ಆನಂತರ ರಾಜಾ ರಾಣಿ, ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರು.
ಮದುವೆ
ಬಿಗ್‌ಬಾಸ್ ಮನೆಯಲ್ಲಿದ್ದಾಗ ಗಾಯಕ ಚಂದನ್ ಶೆಟ್ಟಿ ಇವರಿಗಾಗಿ ಹಾಡೊಂದನ್ನು ಸಿದ್ಧಪಡಿಸಿ ಕಂಪೋಸ್ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ದೊಡ್ಮನೆಯಿಂದ ಹೊರಬಂದ ಬಳಿಕ ಸರ್ಕಾರದ ವತಿಯಿಂದ ಆಯೋಜಿಸಲಾದ ಯುವ ದಸರಾ ಕಾರ್ಯಕ್ರಮದಲ್ಲಿ ಮೈಸೂರು ಜನತೆಯ ಮುಂದೆಯೇ ನಿವೇದಿತಾ ಕೈಬೆರಳಿಗೆ ಉಂಗುರ ತೊಡಿಸಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಮಾಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದಾದ ಬಳಿಕ 2020 ಫೆಬ್ರವರಿ 26ರಂದು ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು.
ವಿಚ್ಛೇದನ
ನಾಲ್ಕು ವರ್ಷಗಳ ಕಾಲ ಸಹಜೀವನ ನಡೆಸಿದ್ದ ಚಂದನ್ ಹಾಗೂ ನಿವೇದಿತಾ, 2024ರ ಜೂನ್ 7ರಂದು ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದುಕೊಂಡಿದ್ದಾರೆ.