ದರ್ಶನ್ ಬಿಡುಗಡೆ ವಿಶೇಷ ಪೂಜೆ: ಕಿಚ್ಚ, ಯಶ್, ಶಿವಣ್ಣಗೂ ಆಹ್ವಾನ ಸಿಕ್ಕಿತೇ?

Spread the love

ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಹೆಚ್ಚು ಕಡಿಮೆ ಒಂದೂವರೆ ತಿಂಗಳಾಗುತ್ತಿದೆ. ಇನ್ನೂ ಕೆಲವು ದಿನಗಳಂತೂ ದರ್ಶನ್ ಜೈಲಿನಿಂದ ಹೊರಬರುವುದು ಅನುಮಾನ. ಇನ್ನೊಂದು ಕಡೆ ದಿನದಿಂದ ದಿನಕ್ಕೆ ದರ್ಶನ್ ವಿರುದ್ಧ ಸಾಕ್ಷಿಗಳು ಬಲವಾಗಿವೆ ಅನ್ನೋ ಮಾಹಿತಿ ಕೇಳಿಬರುತ್ತಿದೆ. ರೇಣುಕಾಸ್ವಾಮಿ ಹತ್ಯೆ ನಡೆದ ಸಂದರ್ಭದಲ್ಲಿ ದರ್ಶನ್ ಧರಿಸಿದ್ದ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸುವುದು ಬಾಕಿಯಿದೆ. ಅಲ್ಲಿವರೆಗೂ ದರ್ಶನ್ ಜೈಲಿನಿಂದ ಬಿಡುಗಡೆಯಾಗುವುದು ಡೌಟು. ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಮಾಡಿರುವ ಆರೋಪಗಳನ್ನು ಮುಂದಿಟ್ಟುಕೊಂಡು ದರ್ಶನ್ ಪರ ವಕೀಲರು ಜಾಮೀನು ಅರ್ಜಿಯನ್ನು ಸಲ್ಲಿಸಲು ಮುಂದಾಗುತ್ತಾರೆ.

ಇನ್ನೊಂದು ಕಡೆ ಅಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗ ದರ್ಶನ್ ಬಿಡುಗಡೆಯಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದು ಕಡೆ ದರ್ಶನ್ ಬಿಡುಗಡೆಗಾಗಿ ಸ್ಯಾಂಡಲ್‌ವುಡ್ ಕಲಾವಿದರು ದೇವರ ಮೊರೆ ಹೋಗುವುದಕ್ಕೆ ನಿರ್ಧರಿಸಿದ್ದಾರಂತೆ. ದರ್ಶನ್‌ಗೆ ಆಪ್ತರಾಗಿರುವ ರಾಕ್​ಲೈನ್ ವೆಂಕಟೇಶ್ ಹಾಗೂ ದೊಡ್ಡಣ್ಣ ಈ ಪೂಜೆಯನ್ನು ಆಯೋಜಿಸಿದ್ದು, ಕಲಾವಿದರಿಗೆ ಆಹ್ವಾನ ನೀಡಲಾಗಿದೆ.

Leave a Reply

Your email address will not be published. Required fields are marked *