ಬಳ್ಳಾರಿ: ಗರ್ಭಗುಡಿಯಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ; ಅರ್ಚಕನನ್ನು ವಜಾಗೊಳಿಸಿದ ಮುಜರಾಯಿ ಇಲಾಖೆ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಇಟ್ಟು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿನ ಬೃಹತ್ ನಂದಿ ವಿಗ್ರಹದ ಎದುರು ಅಮವಾಸ್ಯೆಯಂದು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಹಲವು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ. ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಮಂಗಳಾರತಿ ಎತ್ತಿದ್ದಾರೆ. ಈ ಫೊಟೋಗಳು ವೈರಲ್​ ಆಗುತ್ತಿದ್ದಂತೆ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕ ಮಲ್ಲಿ ಎಂಬುವರನ್ನು ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.

ಸರ್ಕಾರದ ಧಾರ್ಮಿಕ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ಹೀಗೆ ಮಾಡುವುದು ಸರಿಯೇ? ಎನ್ನುವ ಪ್ರಶ್ನೆ ಎದ್ದಿದೆ. ದರ್ಶನ್​​ ಅವರಿಗೆ ಒಳ್ಳೆಯದಾಗಲಿ, ಸಂಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿಸಲಿ. ಅದು ಬಿಟ್ಟು ದೇವರ ಮುಂದೆ ಫೋಟೋ ಇಟ್ಟು ಪೂಜೆ ಮಾಡಿರುವುದು ಎಷ್ಟು ಸರಿ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *