ಪವಿತ್ರಾಗೌಡ ಚಪ್ಪಲಿಯಲ್ಲೂ ರೇಣುಕಾಸ್ವಾಮಿ ರಕ್ತ ಕಲೆ ಪತ್ತೆ: A1 ಆರೋಪಿ ವಿರುದ್ಧ ಮತ್ತಷ್ಟು ಸಾಕ್ಷ್ಯ ಲಭ್ಯ!

Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ. ಶೀಘ್ರದಲ್ಲೇ ಚಾರ್ಚ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 33 ಸಿಸಿಟಿವಿ ಕ್ಯಾಮರಾ ದೃಶ್ಯಗಳೇ ದರ್ಶನ್ ವಿರುದ್ಧ ಪ್ರಮುಖ ಸಾಕ್ಷಿಗಳಾಗಿವೆ.

ಇನ್ನೂ ಮತ್ತೊಂದೆಡೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾಗೌಡ ಚಪ್ಪಲಿಯಲ್ಲೂ ಮೃತ ವ್ಯಕ್ತಿಯ ರಕ್ತ ಕಲೆ ಪತ್ತೆಯಾಗಿದೆ.

ಹೀಗಾಗಿ ಆರೋಪಿ ಪವಿತ್ರಾಗೌಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.

ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ. ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಆರೋಪ ನಟಿ ಮೇಲಿತ್ತು. ಈಗ ಅದೇ ಚಪ್ಪಲಿ ಮೇಲೆ ಕೊಲೆಯಾದ ವ್ಯಕ್ತಿಯ ರಕ್ತದ ಕಲೆ ಇರುವುದು ತಿಳಿದುಬಂದಿದೆ.

ಇನ್ನು, ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *