ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶದ ‘ಇಬ್ಬನಿ ತಬ್ಬಿದ ಇಳೆಯಲಿ’ ರಿಲೀಸ್ ಡೇಟ್ ಫಿಕ್ಸ್!

Spread the love

ರಕ್ಷಿತ್ ಶೆಟ್ಟಿ ಪರಮಾವ್ ಸ್ಟುಡಿಯೋಸ್ ನಿರ್ಮಾಣದ, ಚಂದ್ರಜಿತ್ ಬೆಳ್ಳಿಯಪ್ಪ ಚೊಚ್ಚಲ ನಿರ್ದೇಶನದ, ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಅಭಿನಯದ ರೊಮ್ಯಾಂಟಿಕ್ ಚಿತ್ರವು ಸೆಪ್ಟೆಂಬರ್ 5 ರಂದು ಗೌರಿ ಮತ್ತು ಗಣೇಶ ಹಬ್ಬದಂದು ಥಿಯೇಟರ್‌ಗೆ ಬರಲಿದೆ.

ಪೋಸ್ಟರ್​ ಹಂಚಿಕೊಂಡ ನಿರ್ಮಾಪಕ ರಕ್ಷಿತ್​​ ಶೆಟ್ಟಿ, ಇದು ಯಾವುದೇ ಸುಂದರ, ಮ್ಯಾಜಿಕ್​​ ಕನಸಿಗೆ ಕಡಿಮೆಯಿಲ್ಲ. ಇಬ್ಬನಿ ತಬ್ಬಿದ ಇಳೆಯಲಿ ಟ್ರೇಲರ್​ ಆಗಸ್ಟ್​ 22ಕ್ಕೆ ಬಿಡುಗಡೆ ಆಗಲಿದೆ ಎಂದು ಬರೆದುಕೊಂಡಿದ್ದಾರೆ. ಚಿತ್ರವು ಈಗಾಗಲೇ ಮೂರು ರೊಮ್ಯಾಂಟಿಕ್ ಹಾಡುಗಳನ್ನು ರಿಲೀಸ್ ಮಾಡಲಾಗಿದೆ. ಕಿರಿಕ್‌ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್‌ ಬೆಳಿಯಪ್ಪ, ರಕ್ಷಿತ್‌ ಅವರ ಸೆವೆನ್‌ ಓಡ್ಸ್‌ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾ ಸಂಗಮ ಚಿತ್ರದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಈಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪ್ರಸ್ತುತ ಈ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಬಿರುಸಿನಿಂದ ಸಾಗಿದೆ.

ವಿಹಾನ್‌ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್‌ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್‌ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕಾಪು ಅವರ ಸಂಕಲನವಿರುವ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕಿದೆ.

Leave a Reply

Your email address will not be published. Required fields are marked *