ರಜನಿಕಾಂತ್ ʼಕೂಲಿʼ ಫೀಲ್ಡ್‌ಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಎಂಟ್ರಿ..?

Spread the love

ಸೂಪರ್ ಸ್ಟಾರ್ ರಜನಿಕಾಂತ್ ಅವರ ಕೂಲಿ ಚಿತ್ರಕ್ಕಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದು, ಚಿತ್ರದಲ್ಲಿ ಶ್ರುತಿ ಹಾಸನ್, ಮಹೇಂದ್ರನ್ ಮತ್ತು ಖ್ಯಾತ ನಟ ಸತ್ಯರಾಜ್ ಕಾಣಿಸಿಕೊಳ್ಳುತ್ತಿರುವುದು ಖಚಿತವಾಗಿದೆ. ಆದರೆ, ಇದೀಗ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್‌’ವೊಂದು ಸಿಕ್ಕಿದೆ.

ಹೌದು.. ಇತ್ತೀಚಿನ ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ರಜನಿಕಾಂತ್ ಅವರೊಂದಿಗೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ನಟಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಸುಪರ್ ಮಾಚಿ ಚಿತ್ರದ ಮೂಲಕ ತೆಲುಗು ಚಿತ್ರಗಳಲ್ಲಿ ಛಾಪು ಮೂಡಿಸಿರುವ ರಚಿತಾ ರಾಮ್ ಅವರು ಇದೀಗ ಕೂಲಿ ಮೂಲಕ ತಮಿಳು ಚಿತ್ರರಂಗಕ್ಕೂ ಪಾದಾರ್ಪಣೆ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.

ಚಿತ್ರದ ಕುರಿತು ಚರ್ಚೆ ನಡೆಸಲು ರಚಿತಾ ರಾಮ್ ಅವರು ಚೆನ್ನೈಗೆ ಭೇಟಿ ನೀಡಿದ್ದಾರೆನ್ನಲಾಗಿದ್ದು, ಈ ಬಗ್ಗೆ ಚಿತ್ರ ತಂಡವೇ ಅಧಿಕೃತ ಮಾಹಿತಿ ನೀಡಬೇಕಿದೆ.ನಟಿ ರಚಿತಾ ರಾಮ್ ಅವರು ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಟಿಸಿ ಹಿಟ್ ಚಿತ್ರಗಳನ್ನು ನೀಡಿದ್ದು, ಇದೀಗ ತಮಿಳು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ರಚಿತಾ ಅವರು ನಾಗಶೇಖರ್ ಅವರ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಚಿತ್ರದಲ್ಲಿ ನಟ ಉಪೇಂದ್ರ ಅವರು ನಟಿಸುತ್ತಿದ್ದಾರೆನ್ನಲಾಗಿದ್ದು, ಈ ವಿಚಾರವನ್ನು ಉಪೇಂದ್ರ ಅವರೇ ದೃಢಪಡಿಸಿದ್ದರು. ರಜನಿಕಾಂತ್ ಜೊತೆ ನಟಿಸುತ್ತಿರುವುದು ಖುಷಿ ವಿಚಾರ ಎಂದು ಹೇಳಿದ್ದರು. ಆದರೆ, ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದರು.

ಕೂಲಿ ಚಿತ್ರ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೊದಲು ತಲೈವಾ 171 ಎನ್ನುವ ಶೀರ್ಷಿಕೆ ಇಡಲಾಗಿತ್ತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.

Leave a Reply

Your email address will not be published. Required fields are marked *