ಕನ್ನಡ ಚಿತ್ರರಂಗದ ‘ಲೇಡಿ ಸೂಪರ್‌ಸ್ಟಾರ್’, ಕನಸಿನ ರಾಣಿ ಎಂದೇ ಜನಪ್ರಿಯತೆ ಗಳಿಸಿರುವ ಮಾಲಾಶ್ರೀ, ಇತ್ತೀಚಿಗೆ ‘ನೈಟ್ ಕರ್ಫ್ಯೂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಈಗ ಪೆನ್ ಡ್ರೈವ್’ ಎಂಬ ಹೊಸ ಸಿನಿಮಾದೊಂದಿಗೆ ಸೆಟ್‌ಗೆ ಮರಳಿದ್ದಾರೆ. ಆರ್ ಎಚ್ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ “ಪೆನ್ ಡ್ರೈವ್” ಚಿತ್ರದ ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಆದರೆ ಅವರ ಪಾತ್ರದ ಬಗ್ಗೆ ನಿರ್ಧಿಷ್ಟ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರು. ಮಾಲಾಶ್ರೀ, ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪೆನ್ ಡ್ರೈವ್‌ಗೆ ಸಂಗೀತವನ್ನು ವಿ ನಾಗೇಂದ್ರ ಪ್ರಸಾದ್ ಸಂಯೋಜಿಸಿದ್ದಾರೆ, ಅವರು ಚಿತ್ರಕ್ಕೆ ಸಾಹಿತ್ಯವನ್ನೂ ಬರೆದಿದ್ದಾರೆ.ರಾಜ್ಯದಲ್ಲಿ ನಡೆದ ಪೆನ್ ಡ್ರೈವ್ ಪ್ರಕರಣಕ್ಕೂ ಈ ಪೆನ್ ಡ್ರೈವ್ಗೂ ಯಾವುದೇ ಸಂಬಂಧವಿಲ್ಲ. ಕಥೆಗೆ ತಕ್ಕಂತೆ ಪೆನ್ ಡ್ರೈವ್ ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಸೆಬಾಸ್ಟಿನ್ ಡೇವಿಡ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ಅನುಭವ ಇವರಿಗಿದೆ. ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.