ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹುನಿರೀಕ್ಷಿತ ಚಿತ್ರ ‘ಬಘೀರ’ ಸಿನಿಮಾ ಅಕ್ಟೋಬರ್ 31ಕ್ಕೆ ಬಿಡುಗಡೆಯಾಗುತ್ತಿದೆ.
ಬಘೀರ ಚಿತ್ರಕ್ಕೆ ಬ್ಲಾಕ್ಬಸ್ಟರ್ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಲಕ್ಕಿ ಸಿನಿಮಾ ಬಳಿಕ ಡಾ.ಸೂರಿ ನಿರ್ದೇಶನ ಮಾಡುತ್ತಿರುವ ಚಿತ್ರ ಇದಾಗಿದೆ. ಶ್ರೀಮುರಳಿಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದು, ಇವರ ಜೊತೆ ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡ ರಾಮ್ ಮುಖ್ಯ ತಾರಾಗಣದಲ್ಲಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ, ಎ.ಜೆ ಶೆಟ್ಟಿ ಛಾಯಾಗ್ರಹಣ, ಪ್ರಣವ್ ಶ್ರೀ ಪ್ರಸಾದ್ ಸಂಕಲನ ಈ ಚಿತ್ರಕ್ಕಿದೆ. ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲ್ಮ್ ಸಂಸ್ಥೆ ಬಘೀರ ಸಿನಿಮಾವನ್ನು ಬಹಳ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.ಡಾ.ಸೂರಿ ನಿರ್ದೇಶನದ ಈ ಚಿತ್ರದಲ್ಲಿ ಶ್ರೀಮುರಳಿ ಎರಡು ಶೇಡ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಅಭಿಮಾನಿ ಬಳಗದಲ್ಲಿ ಈಗಾಗಲೇ ದೊಡ್ಡ ಮಟ್ಟದ ಕುತೂಹಲ, ನಿರೀಕ್ಷೆ ಹುಟ್ಟಿದೆ.
ಬಘೀರ ಸಿನಿಮಾ ಕನ್ನಡ ಅಷ್ಟೇ ಅಲ್ಲದೇ. ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸೇರಿದಂತೆ ಬಹು ಭಾಷೆಯಲ್ಲಿಯೂ ತೆರೆಗೆ ಬರುತ್ತಿದೆ.