ಅಭಿಮಾನಿಗಳನ್ನು ‘ಸೆಲೆಬ್ರಿಟಿಸ್’ ಎಂದೇ ಕರೆಯುವ ನಟ ದರ್ಶನ್ ಇದೀಗ ಅದೇ ಸೆಲೆಬ್ರಿಟಿಸ್ ಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು. ಅವರ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.
ಡೆವಿಲ್ ಚಿತ್ರದಿಂದ ಚಂದು ಔಟ್: ಈ ರೀತಿಯ ನಡೆಯಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ.ಚಂದು ಅಥವಾ ನನ್ನ ಮಗ ವಿನೀಶ್ ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ ಎಂದು ಹೇಳುವ ಮೂಲಕ ವಾರ್ನಿಂಗ್ ನೀಡಿದ್ದಾರೆ